ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ನಡೆಸ ದರೋಡೆ ಪ್ರಕರಣದ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಪ್ರಯತ್ನಿಸಿದ ಆರೋಪಿ ಮೇಲೆ ಫೈರಿಂಗ್ ನಡೆಸಿದ ಘಟನೆ ವರದಿಯಾಗಿದೆ. ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ತಮಿಳುನಾಡಿನಿಂದ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಇಂದು ಸಿಸಿಬಿ ಪೊಲೀಸರು ಹಾಗೂ
ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಕರೆದುಕೊಂಡು ಹೋಗಿದ್ದರು. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಯತ್ನ ಹಿನ್ನೆಲೆ ಆರೋಪಿ ಕಣ್ಣನ್ಮಣಿ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿಯನ್ನ ನಿನ್ನೆ ತಮಿಳುನಾಡಿನ ತಿರುವನ್ವೇಲಿಯಲ್ಲಿ ಬಂಧಿಸಿದ್ದ ಪೊಲೀರು ಇಂದು ರಾಜ್ಯಕ್ಕೆ ಕರೆದುಕೊಂಡು ಬಂದ ವೇಳೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಅಲಂಕಾರು ಗುಡ್ಡ ಬಳಿ ಆರೋಪಿ ಕಣ್ಣನ್ಮಣಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ವೇಳೆ ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ. ಆತನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಪೊಲೀಸರಿಗೂ ಅವರಿಗೆ ಗಾಯಗಳಾಗಿವೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.