ಮುಂಬೈ: ಕರ್ನಾಟಕದ ರೋಜರ್ ಬಿನ್ನಿ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) 36ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. 67 ವರ್ಷದ ಬಿನ್ನಿ ಅವರನ್ನು ಬಿಸಿಸಿಐ ಸರ್ವ ಸದಸ್ಯರ ಸಭೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಂಡಳಿಯ ಕಾರ್ಯದರ್ಶಿ ಆಗಿ ಜಯ್ ಶಾ ಅವರೂ ಸತತ ಎರಡನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ರಾಜೀವ್ ಶುಕ್ಲಾ, ಖಜಾಂಚಿ ಆಶೀಶ್ ಶೆಲಾರ್, ಜಂಟಿ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಅವರೂ ಅವಿರೋಧವಾಗಿಯೇ ಆಯ್ಕೆಯಾಗಿದ್ದಾರೆ. ಭಾರತ ಪರ 27 ಟೆಸ್ಟ್, 72 ಏಕದಿನ ಪಂದ್ಯಗಳಲ್ಲಿ ಆಡಿರುವ ಬಿನ್ನಿ, 1983ರಲ್ಲಿ ಟೀಂ ಇಂಡಿಯಾ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.