ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ.25 ರಂದು ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದ ಉಸ್ತುವರಿ ಎಐಸಿಸಿ ಕಾರ್ಯದರ್ಶಿ ರೋಜಿ ಎಂ.ಜಾನ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು. ಚೆನ್ನಕೇಶವ ದೇವಸ್ಥಾನದ ಮುಂಭಾಗದ
ಮೈದಾನದಲ್ಲಿ ಸಮಾವೇಶ ನಡೆಯಲಿದ್ದು ವೇದಿಕೆ ನಿರ್ಮಾಣ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಚುನಾವಣಾ ಉಸ್ತುವಾರಿ ಎಂ.ವೆಂಕಪ್ಪ ಗೌಡ, ಸರಸ್ವತಿ ಕಾಮತ್, ಸುರೇಶ್ ಅಮೈ, ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೊ ದಿನೇಶ್ ಅಂಬೆಕಲ್ಲು, ಕೀರ್ತನ್ ಕೊಡಪಾಲ, ಸವಾದ್ ಸುಳ್ಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.