ಸುಳ್ಯ: ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಇಂಜಿನಿಯರುಗಳ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ರೋಟರಿ ಸಮುದಾಯ ಭವನದಲ್ಲಿ ನಡೆಯಿತು.ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ಗಿರೀಶ್ ನಾರ್ಕೋಡು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯದ ಹಿರಿಯ
ಇಂಜನಿಯರ್ ಸೂರ್ಯ ರೈ ಹೊಸಮನೆಯವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆವಿಜಿ ಇಂಜನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಪ್ರೊ.ಚಂದ್ರಶೇಖರ ಇಂಜಿನಿಯರುಗಳ ದಿನಾಚರಣೆಯ ಕುರಿತು ಮಾತನಾಡಿದರು. ವೇದಿಕೆಯಲ್ಲಿ ರೋಟಟರಿ ನಿಕಟ ಪೂರ್ವದ್ಯಕ್ಷ ಮುರಳೀಧರ ರೈ, ನಿಯೋಜಿತ ಅಧ್ಯಕ್ಷ ಶಿವಪ್ರಶಾದ್ ಕೆ ವಿ, ಕಾರ್ಯದರ್ಶಿ ಚೇತನ್ ಪಿ ಎನ್ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.