ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 40 ರನ್ಗಳ ಜಯ ದಾಖಲಿಸಿದೆ.
ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 159 ರನ್ಗಳ ಸಾಧಾರಣ ಮೊತ್ತ ಗಳಿಸಿತು. ಗುರಿ ಬೆನ್ನಟ್ಟಿದ
ಲಖನೌ 18 ಓವರ್ಗಳಲ್ಲಿ 119 ರನ್ ಗಳಿಸಿ ಆಲ್ ಔಟ್ ಆಯಿತು. 55 ರನ್ ಗಳಿಸಿದ ಮಿಚೆಲ್ ಮಾರ್ಷ್ ಮಾತ್ರ ಕೊಂಚ ಪ್ರತಿರೋಧ ತೋರಿದರು. ಉಳಿದ ಬ್ಯಾಟರ್ಗಳು ವೈಫಲ್ಯ ಅನುಭವಿಸಿಸರು. ನಾಯಕ ಋಷಬ್ ಪಂತ್,ಏಡಂ ಮರ್ಕರಂ, ಆಯುಷ್ ಬಡೋನಿ ಸೊನ್ನೆ ಸುತ್ತಿದರು. ನಿಕೋಲಾಸ್ ಪೂರಾನ್ 22 ರನ್ ಗಳಿಸಿದರು. ರಾಯಲ್ಸ್ ಪರ ಜೋಪ್ರಾ ಆರ್ಚರ್ 3, ನಂದ್ರೆ ಬರ್ಗರ್, ಬ್ರಿಜೇಶ್ ಶರ್ಮ ತಲಾ 2 ವಿಕೆಟ್ ಪಡೆದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ರಾಜಸ್ಥಾನದ ಆರಂಭ ಉತ್ತಮವಾಗಿರಲಿಲ್ಲ.15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ (8) ಹಾಗೂ ಯಶಸ್ವಿ ಜೈಸ್ವಾಲ್ (22) ಬ್ಯಾಟಿಂಗ್ ವೈಫಲ್ಯವನ್ನು ಕಂಡರು.ವಿಕೆಟ್ ಕೀಪರ್, ಬ್ಯಾಟರ್ ಧ್ರುವ್ ಜುರೇಲ್ ಖಾತೆ ತೆರೆಯುವಲ್ಲಿ ವಿಫಲರಾದರು.ನಾಯಕ ರಿಯಾನ್ ಪರಾಗ್ (20) ಹಾಗೂ ಶಿಮ್ರಾನ್ ಹೆಟ್ಮೆಯರ್ (22) ಮಗದೊಮ್ಮೆ ನಿರಾಸೆ ಮೂಡಿಸಿದರು.ಕೆಳ ಕ್ರಮಾಂಕದಲ್ಲಿ ಅಜೇಯ 43 ರನ್ಗಳ ಉಪಯುಕ್ತ ಇನಿಂಗ್ಸ್ ಕಟ್ಟಿದ ರವೀಂದ್ರ ಜಡೇಜ ತಂಡವು ಸವಾಲಿನ ಮೊತ್ತ ಪೇರಿಸಲು ನೆರವಾದರು. 29 ಎಸೆತಗಳನ್ನು ಎದುರಿಸಿದ ಜಡೇಜ ಇನಿಂಗ್ಸ್ನಲ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿದ್ದವು.ಇನ್ನುಳಿದಂತೆ ಡೊನೊವನ್ ಫೆರೆರಾ (20) ಹಾಗೂ ಶುಭಂ ದುಬೆ (19*) ರನ್ ಗಳಿಸಿದರು.
ಲಖನೌ ಪರ ಮೊಹಮ್ಮದ್ ಶಮಿ, ಪ್ರಿನ್ಸ್ ಯಾದವ್ ಹಾಗೂ ಮೊಹಸಿನ್ ಖಾಲ್ ತಲಾ ಎರಡು ವಿಕೆಟ್ ಗಳಿಸಿದರು.














