ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ 20 ರನ್ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು.ರಾಜಸ್ಥಾನ 20 ಓವರ್ಗಳಲ್ಲಿ
ನಾಲ್ಕು ವಿಕೆಟ್ ಕಳೆದುಕೊಂಡು 193 ರನ್ಗಳಿಸಿತು. ನಾಯಕ ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ 3 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ ಅಜೇಯ 82 ರನ್ ಬಾರಿಸಿದರು. ರಿಯಾನ್ ಪರಾಗ್ 44 ರನ್ ಗಳಿಸಿದರು. ಲಖನೌ ಪರವಾಗಿ ನವೀನ್ ಉಲ್ ಹಕ್ 2 ವಿಕೆಟ್ ಕಬಳಿಸಿದರು. 194 ರನ್ಗಳ ಗುರಿ ಬೆನ್ನಟ್ಟಿದ ಲಖನೌ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿ ಸೋಲನುಭವಿಸಿತು. ಲಖನೌ ಪರವಾಗಿ ಕೆ.ಎಲ್.ರಾಹುಲ್ 58, ನಿಕೋಲಸ್ ಪೂರನ್ 64 ರನ್ ಗಳಿಸಿದರು. ರಾಜಸ್ಥಾನ ಪರ ಬೌಲ್ಟ್ 2 ವಿಕೆಟ್ ಪಡೆದರು.









