ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧ 30 ರನ್ಗಳ ಜಯ ದಾಖಲಿಸುವ ಮೂಲಕ ಪ್ರಸಕ್ತ ಸಾಲಿನ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪ್ಲೇ ಆಫ್ ಪ್ರವೇಶಿಸಿದೆ.16 ಅಂಕಗಳೊಂದಿಗೆ ನಾಲ್ಕನೇ ಸ್ಥಾನಿಯಾಗಿ ಆರ್ಆರ್ ಪ್ಲೇಆಫ್ಗೇರಿತು. ಸೂರ್ಯಕುಮಾರ್ ಯಾದವ್ ಅವರ ಏಕಾಂಗಿ ಹೋರಾಟದ ಹೊರತಾಗಿಯೂ
ಮುಂಬೈ ಇಂಡಿಯನ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋಲನುಭವಿಸಿತು.
ರಾಜಸ್ಥಾನ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು.206 ರನ್ಗಳ ಗೆಲುವಿನ ಗುರಿ ಬೆನ್ನಟ್ಟಿದ ಮುಂಬೈ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 175 ರನ್ಗಳಿಸಲಷ್ಟೇ ಶಕ್ತವಾಯಿತು.38 ರನ್ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಮುಂಬೈಗೆ ಸೂರ್ಯಕುಮಾರ್ ಯಾದವ್ ಮತ್ತು ವಿಲ್ ಜಾಕ್ಸ್ 63 ರನ್ಗಳ ಜತೆಯಾಟ ನಡೆಸಿದರು.ಜಾಕ್ಸ್ 18 ಎಸೆತದಲ್ಲಿ 3 ಬೌಂಡರಿ, 2 ಸಿಕ್ಸರ್ನಿಂದ 33 ರನ್ಗಳಿಸಿ ಹೊರನಡೆದರು. ಆಗ ಕ್ರಿಸ್ಗೆ ಬಂದ ಹಾರ್ದಿಕ್ ಪಾಂಡ್ಯ ಕೇವಲ 15 ಎಸೆತದಲ್ಲಿ 3 ಬೌಂಡರಿ, 2 ಸಿಕ್ಸರ್ನಿಂದ 34 ರನ್ಗಳಿಸಿದರು. ಸೂರ್ಯಕುಮಾರ್ ಯಾದವ್ 42 ಎಸೆತದಲ್ಲಿ 3 ಬೌಂಡರಿ, 4 ಸಿಕ್ಸರ್ನಿಂದ 60 ರನ್ಗಳಿಸಿ ಪಂದ್ಯದಲ್ಲಿ ಹೆಚ್ಚು ರನ್ ಗಳಿಸಿದರು.
ಇದಕ್ಕೂ ಮುನ್ನ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ 54 ರನ್ಗಳಿಗೆ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಬಳಿಕ ದಾಸುನ್ ಶನಕ (29) ಮತ್ತು ಧ್ರುವ್ ಜುರೆಲ್ (38) ಜೋಡಿ 45 ರನ್ಗಳ ಜತೆಯಾಟ ನಡೆಸಿ ತಂಡಕ್ಕೆ ಆಸರೆಯಾದರು. ಇವರ ಬಳಿಕ ಜೋಫ್ರಾ ಆರ್ಚರ್ ಕೇವಲ 15 ಎಸೆತದಲ್ಲಿ 1 ಬೌಂಡರಿ, 3 ಸಿಕ್ಸರ್ ಸೇರಿದಂತೆ 32 ರನ್ಗಳಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು.
ಅಂತಿಮವಾಗಿ ರವೀಂದ್ರ ಜಡೇಜಾ ಅಜೇಯ 19, ನಾಂದ್ರೆ ಬರ್ಗರ್ 10 ರನ್ ಗಳಿಸಿ ಅಜೇಯರಾಗಿ ಉಳಿದರು.














