ಸುಳ್ಯ: ಪಶುಪಾಲನಾ ಇಲಾಖೆ, ಮೀನುಗಾರಿಕಾ ಇಲಾಖೆ ಸೇರಿ ವಿವಿಧ ಇಲಾಖೆಗಳು ಸ್ವ ಉದ್ಯೋಗ ನೀಡುವುದರಲ್ಲಿ ದೊಡ್ಡ ಕೊಡುಗೆ ನೀಡುತಿದೆ. ಇಲಾಖೆಗಳಿಂದ ಸ್ವ ಉದ್ಯೋಗ ಸೃಷ್ಠಿಗೆ ಹೆಚ್ಚಿನ ಆದ್ಯತೆ ಮತ್ತು ಪ್ರೋತ್ಸಾಹ ನೀಡಲಾಗುತಿದೆ ಎಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇದರ ವತಿಯಿಂದ 2021-22 ನೇ ಸಾಲಿನ

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹಾಗೂ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ದನದ ಕೊಟ್ಟಿಗೆಯಲ್ಲಿ ಹಾಸುವ ರಬ್ಬರ್ ನೆಲಹಾಸು(ಮ್ಯಾಟ್) ವಿತರಣೆ ಮಾಡಿ ಅವರು ಮಾತನಾಡಿದರು.
ಸರಕಾರದಿಂದ ದೊರೆಯುವ ವಿವಿಧ ಸವಲತ್ತುಗಳನ್ನು ಸರಿಯಾಗಿ ಉಪಯೋಗಿಸಿ ಅದರ ಲಾಭವನ್ನು ಪಡೆದು ಯಶಸ್ವಿಯಾಗಬೇಕು ಎಂದು ಸಚಿವರು ಹೇಳಿದರು. ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ.ಕೆ.ಎಂ ಉಪಸ್ಥಿತರಿದ್ದರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಅರುಣ್‌ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಲಾಖೆಯ ಆಡಳಿತ ವೈದ್ಯಾಧಿಕಾರಿ ಡಾ.ನಿತಿನ್ ಪ್ರಭು ಸ್ವಾಗತಿಸಿ, ವಂದಿಸಿದರು.ತಾಲೂಕು ಪಂಚಾಯತ್ ಮಾಜಿ ಸದಸ್ಯ ರಾಧಾಕೃಷ್ಣ ಬೊಳ್ಳೂರು, ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡೆಂಕಿರಿ ಮತ್ತಿತರರು ಉಪಸ್ಥಿತರಿದ್ದರು.
12 ಮಂದಿ ಫಲಾನುಭವಿಗಳಿಗೆ ನೆಲ ಹಾಸನ್ನು ವಿತರಿಸಲಾಯಿತು.