ಧರ್ಮಸ್ಥಳ:ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ದೇಶದ ಪ್ರಗತಿಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಸೇವೆ ಮತ್ತು ಸಾಧನೆ ಶ್ಲಾಘನೀಯವಾಗಿದೆ ಎಂದು ಕೆನರಾ ಬ್ಯಾಂಕ್ನ ಮಹಾಪ್ರಬಂಧಕ ಎಂ. ಭಾಸ್ಕರ ಚಕ್ರವರ್ತಿ ಹೇಳಿದರು.
ಅವರು ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಗ್ರಾಮಾಭಿವೃದ್ಧಿ ಮತ್ತು
ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ರುಡ್ಸೆಟ್ ಸಂಸ್ಥೆಗಳ) ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ,ಸಂಸ್ಥೆಗಳ ಪ್ರಗತಿ, ಸಾಧನೆ ಗುರುತಿಸಿ ಹೊಸ ಯೋಜನೆಗಳನ್ನು ರೂಪಿಸುವುದೇ ವಾರ್ಷಿಕ ಸಮ್ಮೇಳನದ ಉದ್ದೇಶವಾಗಿದೆ ಎಂದರು. ನಿರ್ದೇಶಕರುಗಳು ಮತ್ತು ಸಿಬ್ಬಂದಿ ಉತ್ತಮ ಗುಣಮಟ್ಟದ ತರಬೇತಿಗೆ ವೈಯಕ್ತಿಕ ಗಮನ ಹರಿಸಬೇಕೆಂದು ಹೇಳಿ ಶುಭ ಹಾರೈಸಿದರು.ರುಡ್ಸೆಟ್ ಸಂಸ್ಥೆಗಳ ರಾಷ್ಟ್ರೀಯ ನಿಯಂತ್ರಕ ಬೆಂಗಳೂರಿನ ಆರ್.ಆರ್. ಸಿಂಗ್,ರುಡ್ಸೆಟ್ ಸಂಸ್ಥೆಗಳ ಮಹಾನಿರ್ದೇಶಕ ರಾಜು ಎನ್. ಕೋರಿ ಮಾತನಾಡಿದರು.
ಉನ್ನತ ಸಾಧನೆ ಮಾಡಿದ ರುಡ್ಸೆಟ್ ಸಂಸ್ಥೆಗಳನ್ನು ಗೌರವಿಸಲಾಯಿತು.
ರುಡ್ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಸ್ವಾಗತಿಸಿದರು. ಉಜಿರೆ ಸಂಸ್ಥೆಯ ನಿರ್ದೇಶಕ ಅಜೇಯ ಧನ್ಯವಾದವಿತ್ತರು.
ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು.












