ಮೈಸೂರು:ಅಗಲಿದ ಗಾಯಕಿ ಎಸ್.ಜಾನಕಿ ಅವರ ಪಾರ್ಥಿವ ಶರೀರ ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು ಸಾವಿರಾರು ಮಂದಿ ಅಂತಿಮ ನಮನ ಸಲ್ಲಿಸಿದರು. ಸೊಸೆ, ಮೊಮ್ಮಗಳು ಹಾಗೂ ಕುಟುಂಬದವರು ಅಂತಿಮ ವಿಧಿ ವಿಧಾನ ನೆರವೇರಿಸಿದ ಬಳಿಕ
ಪಾರ್ಥಿವ ಶರೀರವನ್ನು ಮಹಾರಾಜ ಕಾಲೇಜು ಮೈದಾನಕ್ಕೆ ತರಲಾಯಿತು.
ಇಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತು ಅಂತಿಮ ದರ್ಶನ ಪಡೆದರು. ಹಲವರು ಕೈಮುಗಿದು, ಪುಷ್ಪನಮನ ಸಲ್ಲಿಸಿದರು.ಸಂಜೆ ಬೋಗಾದಿ- ಗದ್ದಿಗೆ ರಸ್ತೆಯಲ್ಲಿರುವವ ತೋಟದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು.





