ಮೈಸೂರು: ಶನಿವಾರ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ಎಚ್.ಡಿ.ಕೋಟೆ ತಾಲ್ಲೂಕಿನ ಕಣಿಯನ ಹುಂಡಿಯಲ್ಲಿ ಭಾನುವಾರ ಸಂಜೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.ನೆಚ್ಚಿನ ಗಾಯಕಿಯ ಅಂತ್ಯಕ್ರಿಯೆಗಾಗಿ ಸಾವಿರಾರು ಅಭಿಮಾನಿಗಳು ಸೇರಿದ್ದರು.ಮಹಾರಾಜ ಮೈದಾನದಿಂದ ಹೊರಟ
ಪಾರ್ಥೀವ ಶರೀರವು ಕಣಿಯನಹುಂಡಿ ತಲುಪುವ ರಸ್ತೆಯ ಉದ್ದಕ್ಕೂ ಅಭಿಮಾನಿಗಳು ಗುಂಪು- ಗುಂಪಾಗಿ ಸೇರಿದ್ದರು.ರಸ್ತೆ ಬದಿ ನಿಂತಿದ್ದ ಅಭಿಮಾನಿಗಳು ಕೈ ಮುಗಿದು ಕಣ್ಣೀರಾದರು. ಅಂತ್ಯಕ್ರಿಯೆ ಸ್ಥಳದಲ್ಲಿ ಹಾಗೂ ರಸ್ತೆಯುದ್ದಕ್ಕೂ ಬಿಗಿಬಂದೊಬಸ್ತ್ ಏರ್ಪಡಿಸಲಾಗಿತ್ತು.
ಅಂತಿಮ ದರ್ಶನಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಅಭಿಮಾನಿಗಳು, ಸಂಗೀತಾಸಕ್ತರು ಹಾಗೂ ಚಿತ್ರರಂಗದ ಗಣ್ಯರು ಆಗಮಿಸಿ ಜಾನಕಿಯಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಕುಟುಂಬದ ಸದಸ್ಯರು, ಆಪ್ತರು ಮತ್ತು ಬಂಧುಗಳ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳು ನಡೆದವು.
ಸುಮಾರು ಆರು ದಶಕಗಳ ಸಂಗೀತ ಪಯಣದಲ್ಲಿ 17 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದ ಎಸ್.ಜಾನಕಿ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಹಾಗೂ ಹಲವು ಭಾರತೀಯ ಭಾಷೆಗಳಲ್ಲಿ ತಮ್ಮ ಸುಮಧುರ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿದ್ದರು.







































