ಬೆಂಗಳೂರು: ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್.ಎಲ್ ಭೈರಪ್ಪ ಅವರು ಬುಧವಾರ ನಿಧನರಾದರು.ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.ಬುಧವಾರ ಮಧ್ಯಾಹ್ನ
ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.ಮೈಸೂರಿನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದು, ನಿವೃತ್ತಿ ಜೀವನನ್ನು ನಡೆಸುತ್ತಿದ್ದರು.
ವಂಶವೃಕ್ಷ, ದಾಟು, ತಂತು, ಪರ್ವ, ಗೃಹಭಂಗ, ಸಾರ್ಥ, ಮಂದ್ರ ಸೇರಿದಂತೆ ಹಲವಾರ ಕಾದಂಬರಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳು ಕನ್ನಡದಲ್ಲಿ ಅತ್ಯಂತ ಜನಪ್ರಿಯವಾಗಿದ್ದವು. ಹಿಂದಿ, ಮರಾಠಿ, ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾರತೀಯ ಭಾಷೆಗಳಿಗೆ ಭೈರಪ್ಪ ಅವರ ಕಾದಂಬರಿಗಳು ಅನುವಾದಗೊಂಡಿವೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ್, ಪದ್ಮಭೂಷಣ, ಪದ್ಮಶ್ರೀ ಹಾಗೂ ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.





