ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ (92)ಅವರು ನಿಧನರಾದರು. ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ಅವರು ನಿಧನರಾದರು.ಅವರು ಕಳೆದ 6 ತಿಂಗಳಿನಿಂದ ವಯೋಸಹಜ ಅಸೌಖ್ಯದಿಂದ ಬಳಲುತ್ತಿದ್ದರು.
ಇತ್ತೀಚೆಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ
ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದವರು. ಎಸ್.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932ರಲ್ಲಿ ಜನಿಸಿದ್ದರು.1999ರಿಂದ 2004ರ ತನಕ ಮುಖ್ಯಂತ್ರಿಯಾಗಿದ್ದರು. ರಾಜ್ಯಪಾಲರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು.
2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
ವಿಧಾನಸಭೆ ಸ್ಪೀಕರ್, ಉಪಮುಖ್ಯಮಂತ್ರಿ, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು.
ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.