ಸುಳ್ಯ:ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ ಸೂಚಿಸಿದ್ದಾರೆ. ಅವರ ನಿಧನದಿಂದ ಓರ್ವ ರಾಜಕೀಯ ಮತ್ಸದ್ಧಿಯನ್ನು ಕಳೆದುಕೊಂಡಿದೆ. ರಾಜಕೀಯ ಕ್ಷೇತ್ರದಲ್ಲಿ ನನ್ನಂತೆ ಹಲವರನ್ನು ಬೆಳೆಸಿದ್ದರು. ಮುಖ್ಯಮಂತ್ರಿಯಾಗಿದ್ದಾಗ ಸುಳ್ಯ ಕ್ಷೇತ್ರದಲ್ಲಿ ಹಲವು
ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸಿದ್ದರು.
ಅರಂತೋಡು ಮತ್ತು ಸಂಪಾಜೆ ಗ್ರಾಮದ ಕೆಲವು ಮನೆಗಳಿಗೆ ಗ್ಯಾಸ್ ಸಂಪರ್ಕ, ದೂರವಾಣಿ ಸಂಪರ್ಕವನ್ನು ಒದಗಿಸಿಕೊಟ್ಟಿದ್ದರು. ಗ್ರಾಮೀಣ ರಸ್ತೆಗಳು, ಸೇತುವೆಗಳ ಅಭಿವೃದ್ಧಿಗೆ ಅನುದಾನ ಒದಗಿಸಿದ್ದರು.
ಶಾದಿಮಹಲ್, ರಂಗಮಂದಿರ, ಸಂಘ ಸಂಸ್ಥೆಗಳಿಗೆ ಹಾಗೂ ಮಸೀದಿ, ಮದರಸ ಅಭಿವೃದ್ಧಿ ಕಾಮಗಾರಿಗಳಿಗೆ ವಕ್ಪ್ನಿಂದ ಅನುದಾನವನ್ನು ಒದಗಿಸಿ ಕೊಟ್ಟಿರುತ್ತಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಿದ್ದರು.
ಕೇಂದ್ರದ ವಿದೇಶಾಂಗ ಸಚಿವರಾಗಿದ್ದ ಸಂಧರ್ಭದಲ್ಲಿ ಕರ್ನಾಟಕದಿಂದ ಸುಮಾರು 300 ಮಂದಿ ಹಜ್ ಯಾತ್ರಾರ್ಥಿಗಳಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದರು ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಸ್ಮರಿಸಿದ್ದಾರೆ.