ಸುಳ್ಯ:ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.ನಾಮಪತ್ರ ಸಲ್ಲಿಕೆಗೆ ಅವಧಿ ಕೊನೆಗೊಂಡಾಗ ಸುಳ್ಯದಿಂದ ಮನ್ಮಥರು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ನಿರ್ದೇಶಕರಾಗಿ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ನಾಮಪತ್ರಗಳ ಪರಿಶೀಲನೆ, ನಾಮಪತ್ರ ಹಿಂಪಡೆಯುವ ಸಮಯ ಕೊನೆಗೊಂಡ ಬಳಿಕ ಅಧಿಕೃತ ಘೋಷಣೆ ಮಾಡಲಾಗುತ್ತದೆ.








