ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಹಿರಿಯ ಬಿಜೆಪಿ ಮುಖಂಡ ಎಸ್.ಎನ್.ಮನ್ಮಥ ನಾಮಪತ್ರ ಸಲ್ಲಿಸಿದರು. ಮಾ.11ರಂದು ಎಸ್ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ. ಇಂದು ಅವರು ನಾಮಪತ್ರ ಸಲ್ಲಿಸಲಿದರು. ಈ ಸಂದರ್ಭದಲ್ಲಿ
ಶಾಸಕಿ ಭಾಗೀರಥಿ ಮುರುಳ್ಯ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಶಶಿಕುಮಾರ್ ರೈ ಬಾಲ್ಯೋಟ್ಟು, ರಾಜಕೀಯ ಹಾಗೂ ರಾಜಕೀಯ ಕ್ಷೇತ್ರದ ಪ್ರಮುಖರಾದ ವೆಂಕಟ್ ದಂಬೆಕೋಡಿ, ಸಂತೋಷ್ ಜಾಕೆ, ಸಂತೋಷ್ ಕುತ್ತಮೊಟ್ಟೆ, ಶ್ರೀನಾಥ್ ರೈ ಬಾಳಿಲ, ಬಾಲಕೃಷ್ಣ ಕೀಲಾಡಿ, ಸತೀಶ್ ಕೆಮ್ಮನಬಳ್ಳಿ, ರಾಮಕೃಷ್ಣ ರೈ ಪೇರಾಲುಗುತ್ತು, ನಾರಾಯಣ ಗೌಡ ಬೊಮ್ಮೆಟ್ಟಿ, ಕುಶಾಲಪ್ಪ ಪೆರುವಾಜೆ, ದಿನೇಶ್ ಅಡ್ಕಾರ್, ಪದ್ಮನಾಭ ಬೀಡು, ರಾಜೇಶ್ ಬಂಗ್ಲೆಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.







