ಸುಳ್ಯ:ಸುಳ್ಯ ತಾಲೂಕಿನ ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಹಕ್ಕು ಪತ್ರ, ವಿವಿಧ ಸವಲತ್ತುಗಳ ವಿತರಣೆ ಮಾಡುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ
ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮಾಜಿ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ ಮನವಿ ಮಾಡಿದ್ದಾರೆ. ಜೂನ್ ತಿಂಗಳ ಎರಡನೇ ವಾರದಲ್ಲಿ ಸಭೆ ನಡೆಸಲು ದಿನಾಂಕ ನಿಗದಿಗೆ ಸಚಿವರು ಸೂಚನೆ ನೀಡಿದ್ದಾರೆ
ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ, ಸ್ಥಳದಲ್ಲೇ ಸಮಸ್ಯೆ ಪರಿಹಾರ ದೊರೆಯಲಿದೆ ಎಂದು ಸಚಿನ್ ತಿಳಿಸಿದ್ದಾರೆ.