ಸುಳ್ಯ: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿರುವ ಎಲ್ಲಾ 5 ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ. ಯಾವುದೇ ಹೆಚ್ಚಿನ ಷರತ್ತುಗಳಿಲ್ಲದೆ ಗ್ಯಾರಂಟಿಯನ್ನು ಜಾರಿ ಮಾಡಿರುವುದು ಸ್ವಾಗತಾರ್ಹ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ ಹೇಳಿದ್ದಾರೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್
ತನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮನೆ ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರಿಗೆ ಗ್ಯಾರಂಟಿಗಳ ಬಗ್ಗೆ ಆಶ್ವಾಸನೆಗಳನ್ನು ನೀಡಿದ್ದೆವು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಈ ಭರವಸೆಗಳನ್ನು ಈಡೇರಿಸಿರುವುದು ರಾಜ್ಯದ ಜನತೆಗೆ ಸಂತಸ ತಂದಿದೆ. ಐದು ಯೋಜನೆಗಳು ಒಂದಲ್ಲಾ ಒಂದು ರೀತಿಯಲ್ಲಿ ಪ್ರತಿ ಮನೆಗೆ ಸರಕಾರದ ಯೋಜನೆಗಳು ತಲುಪಲಿದೆ. ಕಾಂಗ್ರೆಸ್ ನೀಡಿದ ಪ್ರಣಾಳಿಕೆಯನ್ನು, ಗ್ಯಾರಂಟಿಗಳನ್ನು ನೀಡಿದಾಗ ಜನತೆ ಅಭೂತಪೂರ್ವ ಬೆಂಬಲ ನೀಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದೆ. ಕಾಂಗ್ರೆಸ್ ಜನರಿಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವ ವಿಶ್ವಾಸ ಇದೆ ಎಂದು ಸದಾನಂದ ಮಾವಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.