ಕಾಸರಗೋಡು:ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ಮತ್ತು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅನುರಾಧ ಕುರುಂಜಿಯವರಿಗೆ “ನಾಡೋಜ ಡಾ.ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026” ನ್ನು ಪ್ರದಾನ ಮಾಡಲಾಯಿತು. ಕಾಸರಗೋಡಿನ
ಕನ್ನಡ ಭವನದ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ವೇದಿಕೆಯಲ್ಲಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರ, ಸಾಹಿತ್ಯ ಸಮಾಜಸೇವೆ ಹಾಗೂ ಸಂಘಟನೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಗಾಗಿ ಡಾ. ಕುರುಂಜಿಯವರಿಗೆ ಮತ್ತು ಶಿಕ್ಷಣ, ಸಾಹಿತ್ಯ ಸಂಘಟನೆಗೆ ನೀಡಿದ

ಕೊಡುಗೆಗಾಗಿ ಚಂದ್ರಶೇಖರ ಪೇರಸಲು ಅವರಿಗೆ ಪ್ರಶಸ್ತಿಯನ್ನು ನೀಡಲಾಯಿತು. ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಪ್ರದಾನ ಮಾಡಿದರು.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ , ಸಮ್ಮೇಳನದ

ಸರ್ವಾಧ್ಯಕ್ಷರಾದ ಡಾ. ಸಿ ಸೋಮಶೇಖರ್, ಜಾನಪದ ಪರಿಷತ್ತಿನ ಡಾ. ಬಾಲಾಜಿ,ಗಡಿನಾಡು ಕಾಸರಗೋಡಿನ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್, ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.








