ಪಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ನಿರ್ದೇಶಕರಿಗೆ ನಾಯಕತ್ವ ತರಬೇತಿ ಶಿಬಿರ ಪಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ
ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು..ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ನಿರ್ದೇಶಕರುಗಳು ಭಾಗವಹಿಸಿದ್ದರು.











