ಮಂಗಳೂರು:ದೇಶದ ಆರ್ಥಿಕತೆಗೆ ಶಕ್ತಿ ನೀಡಿರುವ ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬೆಳೆಸಿ ಮುಂದಿನ ತಲೆಮಾರಿಗೆ ಕೊಂಡೊಯ್ಯಬೇಕು ಎಂದು
ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು. 73ನೇ ಸಹಕಾರ ಸಪ್ತಾಹದ ಅಂಗವಾಗಿ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರ ಸಪ್ತಾಹದ
ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಹಕಾರ ಕ್ಷೇತ್ರವು ದೇಶಕ್ಕೆ ಆರ್ಥಿಕ ಭದ್ರತೆ ಕೊಟ್ಟಿದೆ.ಸಹಕಾರ ಕ್ಷೇತ್ರವು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಅವರು ಹೇಳಿದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ
ಅಧ್ಯಕ್ಷ ರವಿರಾಜ್ ಹೆಗ್ಡೆ, ಎಸ್ ಸಿಡಿಸಿಸಿ ಬ್ಯಾಂಕ್ ಪ್ರಮುಖರಾದ ದೇವಿಪ್ರಸಾದ್ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಸದಾಶಿವ ಉಳ್ಳಾಲ್, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಎನ್.ಮನ್ಮಥ ಮತ್ತಿತರರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.ಸಾಧನೆ ತೋರಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಹಕಾರ ಸಂಘಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ, ಉತ್ತಮ ಸ್ವ ಸಹಾಯ ಸಂಘಗಳಿಗೆ ಪುರಸ್ಕಾರ ನೀಡಲಾಯಿತು.ಆಕರ್ಷಕ ಮೆರವಣಿಗೆ ಕಾರ್ಯಕ್ರಮಕ್ಕೆ ಮೆರುಗು ನೀಡಿತು.













