ಸುಳ್ಯ:ದ.ಕ.ಜಿಲ್ಲಾ ಸಹಕಾರಿ ನೌಕರರ ಸಹಕಾರಿ ಸಂಘ ನಿ.ಮಂಗಳೂರು ಇದರ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಸುಳ್ಯತಾಲೂಕಿನಿಂದ ಸುಳ್ಯ ವೆಂಕಟರಮಣ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರು ಇಂದು ನಾಮ ಪತ್ರ ಸಲ್ಲಿಸಿದ್ದಾರೆ. ಸಂಘಕ್ಕೆ ಜ.18 ರಂದು ಚುನಾವಣೆ ನಡೆಯಲಿದ್ದು, ಸಂಘದ ಪ್ರಧಾನ ಕಚೇರಿಯಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಲ್ಲಿ ನಾಮಪತ್ರ ಸಲ್ಲಿಸಿದರು.ಈಗಿನ ಆಡಳಿತ ಮಂಡಳಿಯಲ್ಲಿಯೂ ಕೆ.ಟಿ.ವಿಶ್ವನಾಥರು ನಿರ್ದೇಶಕರಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.