ಸುಳ್ಯ: 72 ನೇ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಸಮರೋಪ ಕಾರ್ಯಕ್ರಮವು ಜಾಲ್ಸೂರು ಗ್ರಾಮದ ಅಡ್ಕಾರ್ ವಿನೋಬನಗರದಲ್ಲಿ ನಡೆಯಿತು. ಸಭಾ ಕಾರ್ಯಕ್ರಮವನ್ನು ದ.ಕ ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಿ ಮಾತನಾಡಿ ಕೇಂದ್ರ ಸರಕಾವು ಇದೀಗ ಸಹಕಾರಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ
ವಿಶ್ವವಿದ್ಯಾಲಯ ಸ್ಥಾಪಿಸಿ ಸುಮಾರು 8 ಲಕ್ಷ ಜರನ್ನು ಸಹಕಾರಿ ಕ್ಷೇತ್ರದಲ್ಲಿ ಪರಿಣತರನ್ನಾಗಿ ಮಾಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ವಹಿಸಿದ್ದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೋಡ್ಗಿ , ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಎಸ್.ಎನ್ ಮನ್ಮಥ , ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ದ.ಕ ಹಾಲು ಒಕ್ಕೂಟದ ನಿರ್ದೇಶಕ ಭರತ್ ನೆಕ್ರಾಜೆ , ಸುಳ್ಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ , ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ , ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಉಗ್ಗಮೂಲೆ , ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವಿತ್ರಿ ಅಡ್ಕಾರ್ ಬೈಲು, ಸೋಣಂಗೇರಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರಭಾಕರ ರೈ ಎಸ್ ವಿ , ಸನ್ಮಾನಿತರಾದ ದಿವಾಕರ ರೈ ಪಿ.ಬಿ , ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್ ವಿ ಹಿರೇಮಠ, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಕಾಮತ್ ಕೆ , ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಜಿಲ್ಲಾ ಬ್ಯಾಂಕ್ ಪ್ರತಿನಿಧಿ ವೆಂಕಪ್ಪಬನಾಯ್ಕ್ ದೇರ್ಕಜೆ,ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಹಕಾರ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ತೀರ್ಥರಾಮ ಎ ವಿ , ದಿವಾಕರ ರೈ ಪಿ ಬಿ, ನಿತ್ಯಾನಂದ ಮುಂಡೋಡಿ , ಮಾಧವ ಗೌಡ ಜಾಕೆ , ವಸಂತ ಜಿ ಗಬ್ಬಲಡ್ಕ , ಜಯರಾಮ ರೈ ಹಾಗೂ ಕನಕಮಜಲು ಪ್ರಾಥಮಿಕ ಕೃಷಿಪತ್ತಿನ ನೂರು ವರ್ಷಗಳ ಹಿನ್ನಲೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಗೋಪಾಲ ಕೃಷ್ಣ ಭಟ್ ಹಾಗೂ ನಾರಾಯಣ ಗೌಡ ಬೊಮ್ಮೆಟ್ಟಿ ಯವರನ್ನು ಸನ್ಮಾನಿಸಲಾಯಿತು. ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಕಾಮತ್ ಕೆ ಸ್ವಾಗತಿಸಿ ಪ್ರಸಾದ್ ಕಾಟೂರು ಹಾಗೂ ದಾಮೋದರ ಕಣಜಾಲು ಕಾರ್ಯಕ್ರಮ ನಿರೂಪಿದರು.













