ಸುಳ್ಯ: 2013 ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದಾಗ 470 ರೂ ಇದ್ದ ಗ್ಯಾಸ್ ಸಿಲಿಂಡರ್ ದರ ಈಗ 1100 ಕ್ಕೆ ಏರಿದೆ. ಈಗ 200 ರೂ ಕಡಿತ ಮಾಡಿರುವ ಕೇಂದ್ರ ಸರಕಾರಕ್ಕೆ ಜನರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಗ್ಯಾಸ್ ಸಿಲಿಂಡರ್ ದರ 500ಕ್ಕೆ ಇಳಿಸಿ ಎಂದು ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ಯಾಸ್ ಸಿಲಿಂಡರ್ 500ರೂಗೆ, ಪೆಟ್ರೋಲ್ ಲೀಟರ್ಗೆ 60ರೂಗೆ ಹಾಗೂ
ಡೀಸಿಲ್ ಲೀಟರ್ಗೆ 55ರೂಗೆ ನೀಡಲಿ ಎಂದು ಅವರು ಒತ್ತಾಯಿಸಿದರು. ಕರ್ನಾಟಕದ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ 300ಕ್ಕೂ ಅಧಿಕ ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರಕಾರ ನುಡಿದಂತೆ ನಡೆದಿದೆ ಎಂದ ಅವರು ಐದು ಗ್ಯಾರಂಟಿಗಳನ್ನು ಘೋಷಿಸಿ 4 ನ್ನು ಅನುಷ್ಟಾನ ಮಾಡಿದೆ. ಇದು ಇತಿಹಾಸ.ಇಂದು ಅನುಷ್ಠಾನಗೊಂಡ ಗೃಹಲಕ್ಷ್ಮಿ ಯೋಜನೆ ದೇಶಕ್ಕೆ ಮಾದರಿ ಯುವ ನಿಧಿ ಮುಂದಿನ ದಿನಗಳಲ್ಲಿ ಜಾರಿಗೆ ಬರಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮೂಸಾ ಕುಂಞಿ ಪೈಂಬೆಚ್ಚಾಲ್, ಸಿದ್ದಿಕ್ ಕೊಕ್ಕೊ, ರಂಜಿತ್ ರೈ ಮೇನಾಲ, ಶೌಕತ್ ಮೇನಾಲ, ರಿಯಾಝ್ ಪೈಂಬೆಚ್ಚಾಲ್, ಸಂದೇಶ್, ಕೃಷ್ಣಪ್ಪ ಮೇನಾಲ ಉಪಸ್ಥಿತರಿದ್ದರು.