ಮಡಿಕೇರಿ:ಕಾಂಗ್ರೆಸ್ ಸರ್ಕಾರದಲ್ಲಿ ಮುಸ್ಲೀಂ ಶಾಸಕರಿಗೆ ಉಪ ಮುಖ್ಯಮಂತ್ರಿ ಹಾಗೂ ಐದು ಸಚಿವ ಸ್ಥಾನವನ್ನು ನೀಡಬೇಕೆಂದು ಕೆಪಿಸಿಸಿ ವಕ್ತಾರ ಟಿ.ಎಂ.ಶಾಹಿದ್ ತೆಕ್ಕಿಲ್ ಮನವಿ ಮಾಡಿದ್ದಾರೆ.ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತಿ, ಧರ್ಮ, ಭೇದ ಮರೆತು ರಾಜ್ಯದ ಸರ್ವ ಧರ್ಮೀಯರು ಕಾಂಗ್ರೆಸ್ ಪಕ್ಷವನ್ನು ಬೆಂಬಲಸಿ
ಅಧಿಕಾರಕ್ಕೆ ತಂದಿದ್ದಾರೆ. ಮುಸ್ಲೀಂ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ಹಾಗೂ ಐವರು ಸಚಿವ ಸ್ಥಾನವನ್ನು ನೀಡಬೇಕೆಂದು ಪಕ್ಷದ ವರಿಷ್ಠರ ಬಳಿಯೂ ಕೋರುವುದಾಗಿ ಹೇಳಿದರು. ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಡಾ.ಮಂತರ್ ಗೌಡ ಅವರಿಗೂ ಸಚಿವರಾಗಿ ಅವಕಾಶ ನೀಡಬೇಕು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ನ ಎಲ್ಲಾ ಭರವಸೆಗಳನ್ನು ಈಡೇರಿಸಲಿದ್ದಾರೆ. 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿ. ಕೇಂದ್ರ ಸರಕಾರದ ನೋಟ್ ಬ್ಯಾನ್ ಕ್ರಮದಿಂದ ಆರ್ಥಿಕ ಬೆಳವಣಿಗೆ ಕುಸಿದಿದೆ, ಜಿಎಸ್‌ಟಿಯ ಹೊರೆ ಜನಸಾಮಾನ್ಯರ ಜೀವನಕ್ಕೆ ಹೊರೆಯಾಗಿದೆ. ದೇಶದ ಜನ ಬಿಜೆಪಿ ನೇತೃತ್ವದ ಸರ್ಕಾರದಿಂದ ಬೇಸತ್ತಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಮಡಿಕೇರಿ ನಗರ ಉಪಾಧ್ಯಕ್ಷ ಎಂ.ಎಂ.ಯಾಕುಬ್ ಹಾಗೂ ಜಿಲ್ಲಾ ಸಮಿತಿ ಸದಸ್ಯ ಎಂ.ಹೆಚ್.ಜಫ್ರುಲ್ಲ ಉಪಸ್ಥಿತರಿದ್ದರು.