ಸುಳ್ಯ: ಕಳೆದ ಬಾರಿ ಪ್ರಳಯ,ಭೂಕಂಪದಲ್ಲಿ ಅತೀ ಹೆಚ್ಚು ಹಾನಿಯಾಗಿರುವ ಸಂಪಾಜೆ ಗ್ರಾಮಕ್ಕೆ ವಿಶೇಷ ಅನುದಾನ ಒದಗಿಸಬೇಕು ಎಂದು ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ
ಸಲ್ಲಿಸಿದರು.ದೆಹಲಿಯ ಕರ್ನಾಟಕ ಭನದಲ್ಲಿ ಸಿಎಂ ಅವರನ್ನು ಭೇಟಿಯಾಗಿ ವಿಶೇಷ ಅನುದಾನಕ್ಕೆ ಮನವಿ ಮಾಡಿರುವುದರ ಜೊತೆಗೆ ನದಿ, ಹೊಳೆಗಳಲ್ಲಿ ಮರಳು, ಹೂಳು ತುಂಬಿ ಮತ್ತೆ ಪ್ರಳಯ ಭೀತಿ ಎದುರಾಗಿರುವುದನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ. ಗ್ರಾಮಕ್ಕೆ ವಿಶೇಷ ಅನುದಾನ ನೀಡಲು ಸಂಬಂಧ ಪಟ್ಟವರಿಗೆ ಆದೇಶಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭರವಸೆ ನೀಡಿದ್ದಾರೆ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ. ಅಲ್ಲದೆ ಸಂಪಾಜೆ ಗ್ರಾಮದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 5 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.