ಸುಳ್ಯ:ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಕನ್ನಡ ಸಾಹಿತ್ಯ ಸಮ್ಮೇಳನ ನ.23 ರಂದು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಗೆ ಅವಕಾಶ ನೀಡಲಾಗಿದೆ. ಆದುದರಿಂದ ಈ ಕಾರ್ಯಕ್ರಮದಲ್ಲಿ
ಪುಸ್ತಕ ಬಿಡುಗಡೆ ಮಾಡಲು ಇಚ್ಛಿಸುವ ಲೇಖಕರು ತಮ್ಮ ಹೆಸರು ಹಾಗು ಪುಸ್ತಕದ ಹೆಸರನ್ನು ಅ.22ರ ಒಳಗೆ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಲ್ಲಿ ಹೆಸರು ನೋಂದಾಯಿಸಬೇಕಾಗಿ ವಿನಂತಿಸಲಾಗಿದೆ. ನಂತರ ಬಂದ ಹೆಸರನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು (9448889005)ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಪೇರಾಲು ತಿಳಿಸಿದ್ದಾರೆ.













