ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ‘ಸಮಾಗಮ ಸಭೆಯು’ ಜುಲೈ, 30 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಗಾಂಧಿ ಭವನದಲ್ಲಿ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಹಾಗೆಯೇ ಅರೆಭಾಷೆ ಸಮುದಾಯದ ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ನಿರ್ದೇಶಕರು ಸೇರಿದಂತೆ ಹಲವರು ‘ಸಮಾಗಮ ಸಭೆ’ಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.