ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ರಾಜ್ಯೋತ್ಸವ ಪ್ರಯುಕ್ತ ನಡೆಯುವ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಸಹಯೋಗದೊಂದಿಗೆ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಇದರ ಅಂಗವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಇವರ ನೆನಪು ಕಾರ್ಯಕ್ರಮ ಹಾಗೂ
ಗೀತಾ ಸಾಹಿತ್ಯ ಗಾಯನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಸುಳ್ಯ ಇದರ ಎಸ್ ಡಿ ಎಂ ಸಿ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ ಇವರು ವಹಿಸಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ದೀಪ ಬೆಳಗುವುದರ ಮೂಲಕ ನೆರವೇರಿಸಿದರು.ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ ಅಯ್ಯಂಗಾರ್ ನೆನಪು ಕಾರ್ಯಕ್ರಮವನ್ನು
ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕಿ ಮಮತಾ ಎಂ ಜೆ ಇವರು ನಡೆಸಿಕೊಟ್ಟರು. ವೇದಿಕೆಯಲ್ಲಿ ಹಿರಿಯ ಶಿಕ್ಷಕರಾದ ಸುಂದರ ಕೇನಾಜೆ ,ಕಸಾಪ ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ, ಚಂದ್ರಮತಿ, ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತು ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ , ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಗಾಯಕರಾದ ಕೆ.ಆರ್ ಗೋಪಾಲಕೃಷ್ಣ ತೇಜಸ್ ಕಲ್ಲುಗುಂಡಿ, ಆರತಿ ಪುರುಷೋತ್ತಮ ಹಾಗೂ ಸಂಧ್ಯಾ ಮಂಡೆಕೋಲು ಇವರಿಂದ ವೈವಿಧ್ಯಮಯ ಗೀತಾ ಸಾಹಿತ್ಯ ಗಾಯನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.









