ಸುಳ್ಯ:ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಸುಳ್ಯದ ಸಾಹಿತಿ ಲೀಲಾ ದಾಮೋದರ್ ಉದ್ಘಾಟಿಸಿ ಮಾತನಾಡಿ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಶಾಲಾ – ಕಾಲೇಜುಗಳಲ್ಲಿ ಆಗಬೇಕು ಎಂದು
ಅವರು ಹೇಳಿದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಚಂದ್ರಮತಿ ಕೆ. , ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ, ಖಜಾಂಚಿ ದಯಾನಂದ ಆಳ್ವ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಅಭಿಷೇಕ್, ಶ್ರೀಲಯ, ಸುಜನಾ ರೈ, ಕವಿತಾ ಕನ್ನಡ ಆಶಯ ಗೀತೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ ಡಾ ಅನುರಾಧಾ ಕುರುಂಜಿ ಪ್ರಸ್ಸಾವನೆ ಗೈದು, ಐಕ್ಯೂಎಸಿ ಸಂಯೋಜಕಿ ಡಾ ಮಮತಾ ಕೆ ವಂದಿಸಿದರು. ವಿದ್ಯಾರ್ಥಿನಿ ಯಶಿತಾ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಕನ್ನಡ ನುಡಿ ಸಂಭ್ರಮದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕನ್ನಡ ಸಂಭಾಷಣೆ, ಕನ್ನಡ ಭುವನೇಶ್ವರಿ, ಕನ್ನಡ ಗೀತೆಗಳ ಗಾಯನ, ಕನ್ನಡ ಹಾಡಿಗೆ ನೃತ್ಯ, ಅಂತ್ಯಾಕ್ಷರಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.















