ಸುಳ್ಯ:ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಸಾಹಿತ್ಯ ಸಂಭ್ರಮ -2025 ಇದರ ಸಮಾರೋಪ ಸಮಾರಂಭ- ಸನ್ಮಾನ , ಗಾನ ವೈಭವ ಕಾರ್ಯಕ್ರಮ ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಹಾಗೂ ಕುರಲ್ ತುಳುಕೂಟ ದುಗ್ಗಲಡ್ಕ ಇದರ ಸಹಯೋಗದೊಂದಿಗೆ ದುಗ್ಗಲಡ್ಕದ ಅಯ್ಯಪ್ಪ ಭಜನಾ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು.ಸಮಾರೋಪ ಸಮಾರಂಭದ
ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫಾ ಸಮಾರೋಪ ಭಾಷಣ ಮಾಡಿದರು. ಮುಖ್ಯ ಅತಿಥಿಯಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಭಾಗವಹಿಸಿದರು. ಅರೆಭಾಷೆ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಪಿ.ಸಿ.ಜಯರಾಮ ಸಾಧಕರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ

ಡಾ.ಚಂದ್ರಶೇಖರ ದಾಮ್ಲೆ( ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರ),ಉದಯಕುಮಾರಿ ಬಿರ್ಮುಕಜೆ( ಕಾದಂಬರಿ ಕ್ಷೇತ್ರ), ಚಂದ್ರಶೇಖರ ಗೌಡ ಮೋಂಟಡ್ಕ( ಶಿಕ್ಷಣ ಕ್ಷೇತ್ರ)ಅವರನ್ನು ಸನ್ಮಾನಿಸಲಾಯಿತು. ಚಂದ್ರಾವತಿ ಬಡ್ಡಡ್ಕ ಸನ್ಮಾನಿತರ ಸನ್ಮಾನ ಪತ್ರ ವಾಚಿಸಿದರು. ಸನ್ಮಾನಿತರ ಪರವಾಗಿ ಡಾ.ಚಂದ್ರಶೇಖರ ದಾಮ್ಲೆ ಮಾತನಾಡಿದರು. ಚಿಂತನಾ ಸುಬ್ರಹ್ಮಣ್ಯ ಮಾಣಿಬೆಟ್ಟು, ದುಗ್ಗಲಡ್ಕ ಪ್ರೌಢಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶೀಲಾವತಿ ಮಾಧವ ಅತಿಥಿಯಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೆ.ಎಂ.ಮುಸ್ತಫಾ ಮತ್ತು ಸದಾನಂದ ಮಾವಜಿ ಅವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಕಾರ್ಯಕ್ರಮದ ಸಂಯೋಜಕ, ಕೆವಿಜಿ ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷರಾದ ಕೆ.ಟಿ.ವಿಶ್ವನಾಥ, ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಸುಳ್ಯಕಸಾಪದ ಗೌ.ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ ಮತ್ತು ಶ್ರೀಮತಿ ಚಂದ್ರಮತಿ ಕೆ.,ಗೌ.ಕೋಶಾಧಿಕಾರಿ ದಯಾನಂದ ಆಳ್ವ, ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಯುವಕ ಮಂಡಲದ ಅಧ್ಯಕ್ಷ ತೀರ್ಥರಾಮ ಕೊಯಿಕುಳಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನವ್ಯ ದಿನೇಶ್ ಕೊಯಿಕುಳಿ ಮತ್ತು ಬಳಗದವರು ಆಶಯ ಗೀತೆ ಹಾಡಿದರು. ಕೆ.ಟಿ.ವಿಶ್ವನಾಥ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ತೇಜಸ್ವಿ ಕಡಪಳ ವಂದಿಸಿದರು. ಕಾರ್ಯಕ್ರಮ ಸಂಯೋಜಕ ಹಾಗು ಕಸಾಪ ನಿರ್ದೇಶಕ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಗಾನ ವೈಭವ ಕಾರ್ಯಕ್ರಮ ನಡೆಯಿತು. ದುಗ್ಗಲಡ್ಕದ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ದಯಾನಂದ ಸಾಲಿಯಾನ್ ಅವರನ್ನು ಗೌರವಿಸಲಾಯಿತು.












