ಸುಳ್ಯ: ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ತೇಜಕುಮಾರ್ ಬಡ್ಡಡ್ಕ ಆಯ್ಕೆಯಾಗಿದ್ದಾರೆ. ಕನ್ನಡ ಭವನದಲ್ಲಿ ನ.28ರಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆಯಲ್ಲಿ ನಡೆದ
ಕಸಾಪ ಪೂರ್ವಾಧ್ಯಕ್ಷರುಗಳು, ಸಾಹಿತ್ಯ ಸಮ್ಮೇಳನದ ಪೂರ್ವಾಧ್ಯಕ್ಷರಗಳು ಹಾಗೂ ಕಸಾಪ ಪದಾಧಿಕಾರಿಗಳ ಸಭೆಯಲ್ಲಿ ಈ ಆಯ್ಕೆ ನಡೆದಿದೆ ಎಂದು ತಿಳಿದು ಬಂದಿದೆ. ಡಿ.30ರಂದು ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕದಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.













