ಸುಳ್ಯ:ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ -2025 ಇದರ ಆಶ್ರಯದಲ್ಲಿ ಡಿ.30ರಂದು ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಇಲ್ಲಿ
28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ ಮಾಡಲು ಅವಕಾಶವಿದ್ದು ಆಸಕ್ತರು ಪುಸ್ತಕದ ಹೆಸರು ಹಾಗೂ ಲೇಖಕರ ಹೆಸರನ್ನು ಡಿ.2ರ ಒಳಗೆ ಅಧ್ಯಕ್ಷರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (9448889005) ಇವರಿಗೆ ಕಳುಹಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.













