ಅರಂತೋಡು:ಕನ್ನಡ ಸಾಹಿತ್ಯ ಜಗತ್ತನ್ನು ಹೊಸ ತಲೆಮಾರಿಗೆ ಪರಿಚಯಿಸುವ ಅನಿವಾರ್ಯತೆ ಇದೆ. ಕನ್ನಡ, ನಾಡು ನುಡಿಯ ವಿಚಾರದ ಜಾಗೃತಿಯನ್ನು ಹೊಸ ತಲೆಮಾರಿಗೆ ಮೂಡಿಸಬೇಕು ಎಂದು ಹಿರಿಯ ಸಾಹಿತಿ, ಲೇಖಕ ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟಿದ್ದಾರೆ.
ಅವರು ಅರಂತೋಡಿನಲ್ಲಿ ನಡೆಯುತ್ತಿರುವ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯ ಸಾಹಿತಿ ಲೀಲಾ ದಾಮೋದರ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ ಅವರು ಸ್ಮರಣಸಂಚಿಕೆಯನ್ನು
ಬಿಡುಗಡೆಗೊಳಿಸಿ, ಶುಭಹಾರೈಸಿದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರು ಪ್ರಸ್ತಾವನೆಗೈದು, ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅವರು ಆಶಯ ನುಡಿಗಳನ್ನಾಡಿದರು.
ವೇದಿಕೆಯಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕನ್ನಡ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಕೆ.ಆರ್. ಗಂಗಾಧರ, ತಹಶಿಲ್ದಾರ್ ಮಂಜುಳ ಎಂ, ಅರಂತೋಡು ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವ ಅಡ್ತಲೆ, ನ.ಪಂ.ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸಾಹಿತ್ಯ ಸಮ್ಮೇಳನದ ಸಂಘಟಕರಾದ ಕಿಶೋರ್ ಕುಮಾರ್ ಕಿರ್ಲಾಯ, ಅಬ್ದುಲ್ಲ ಅರಂತೋಡು, ಸುಳ್ಯ ಹೋಬಳಿ ಅಧ್ಯಕ್ಷೆ, ಚಂದ್ರಾವತಿ ಬಡ್ಡಡ್ಕ, ರಾಮಚಂದ್ರ ಪಲ್ಲತ್ತಡ್ಕ, ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ, ಮತಗತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ವಾಗತ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿದರು. ಉಪನ್ಯಾಸಕ ಪದ್ಮಕುಮಾರ್ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿದರು. ಕಾರ್ಯಕ್ರಮದ ಮೊದಲಾಗಿ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ನಾಡಗೀತೆ ಮತ್ತು ರೈತಗೀತೆ ನಡೆಯಿತು. ಉಪನ್ಯಾಸಕ ಮೋಹನಚಂದ್ರ ಕಾರ್ಯಕ್ರಮ ನಿರೂಪಿಸಿದರು.