ಚೆಂಬು:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಚೆಂಬು ಗ್ರಾಮದ ಕೂಡಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆದ
ವಿಚಾರ ಸಂಕಿರಣ ನಡೆಯಿತು.’ಕೃಷಿ ಬದುಕು ಮತ್ತು ಅದರ ಪ್ರಸ್ತುತ ಸವಾಲುಗಳು’ ಎಂಬ ವಿಷಯದ ಕುರಿತು ಕಲ್ಮಡ್ಕದ ಕೃಷಿಕರಾದ ಸುರೇಶ್ಚಂದ್ರ ಟಿ.ಆರ್ ಹಾಗೂ ‘ಭಾಷೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಮಾರ್ಗ’ ಎಂಬ ವಿಷಯದ ಕುರಿತು ಮೇಜರ್ ಡಾ. ಕುಶ್ವಂತ್ ಕೋಳಿಬೈಲ್ ಉಪನ್ಯಾಸ ನೀಡಿದರು.ಸಮ್ಮೇಳನಾಧ್ಯಕ್ಷೆ

ಲೀಲಾ ದಾಮೋದರ ಕುಂದಲ್ಪಾಡಿ,ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮ ನಿರೂಪಿಸಿದರು.

















