ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ, ಸಮ್ಮೇಳನ ಸ್ವಾಗತ ಸಮಿತಿ ಕುಕ್ಕುಜಡ್ಕ 28ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ. ಕುಕ್ಕುಜಡ್ಕದ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಮುನ್ನ
ಕುಕ್ಕುಜಡ್ಕ ಪೇಟೆಯಿಂದ ಸಮ್ಮೇಳನದ ವೇದಿಕೆ ತನಕ

ಕನ್ನಡ ಭುವನೇಶ್ವರಿಯ ವೈಭವದ ಮೆರವಣಿಗೆ ನಡೆಯಿತು. ತಹಶೀಲ್ದಾರ್ ಎಂ.ಮಂಜುಳ ಮೆರವಣಿಗೆಗೆ ಚಾಲನೆ ನೀಡಿದರು. ಸಮ್ಮೇಳನದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ, ಸಾಹಿತಿ ಕೆ.ಆರ್.ತೇಜಕುಮಾರ್ ಬಡ್ಡಡ್ಕ ಅವರನ್ನು ಆಕರ್ಷಕ ವಾಹನ ಮೆರವಣಿಗೆಯಲ್ಲಿ ಕರೆ ತರಲಾಯಿತು.
ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಶ್ರೀನಾಥ್, ತಾಲೂಕು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಉಪಸ್ಥಿತರಿದ್ದರು.
ಚೆಂಡೆ, ವಾದ್ಯ, ಮೇಳಗಳು, ಕೊಂಬು ವಾಲಗ ಮೆರವಣಿಗೆಗೆ ಮೆರುಗು ನೀಡಿತು.

















