ಸುಳ್ಯ: ಕಾಂಗ್ರೆಸ್ ಯಾವತ್ತೂ ಜನಪರ ಹಾಗೂ ಅಭಿವೃದ್ಧಿ ಪರ ರಾಜಕೀಯ ಮಾಡಿದೆಯೇ ಹೊರತು ಚಿಲ್ಲರೆ ರಾಜಕೀಯ ಮಾಡುವುದಿಲ್ಲ ಎಂದು ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಹೇಳಿದ್ದಾರೆ. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಶಿಷ್ಟಾಚಾರ ಪಾಲಿಸದೆ ತರಾತುರಿಯಲ್ಲಿ ಉದ್ಘಾಟನೆ ಮಾಡಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ ಅಭಿವೃದ್ಧಿ ಪರ ಮತ್ತು ಎಲ್ಲರನ್ನು ಒಟ್ಟು ಸೇರಿಸಿ ಮುನ್ನಡೆಸುವ ಪಕ್ಷ ಎಂದು ಹಮೀದ್ ಕುತ್ತಮೊಟ್ಟೆ ಹೇಳಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.