ಸುಳ್ಯ: ತಾಲೂಕು ಆಸ್ಪತ್ರೆಯ ಕಣ್ಣಿನ ಶಸ್ತ್ರ ಚಿಕಿತ್ಸಾ ಯಂತ್ರ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕದೆ ಕಾಂಗ್ರೆಸ್ನ ನಾಮನಿರ್ದೈಶಿತ ಅಧ್ಯಕ್ಷರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಎ.5ರಂದು ನಡೆಯುವ ಕಾರ್ಯಕ್ರಮಕ್ಕೆ
ಅಕಾಡೆಮಿ ಅಧ್ಯಕ್ಷರನ್ನು, ಸೂಡ ಅಧ್ಯಕ್ಷರನ್ನು ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಸರಕಾರದ ನಾಮ ನಿರ್ದೇಶಿತ ಅಧ್ಯಕ್ಷರುಗಳ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕದೆ ಕಡೆಗಣಿಸಿದ್ದಾರೆ. ಇನ್ನು ಈ ರೀತಿ ಶಿಷ್ಟಾಚಾರ ಉಲ್ಲಂಘಿಸಿರುವುದು ಕಂಡು ಬಂದರೆ ಪ್ರತಿಭಟನೆ ನಡೆಸುವುದಾಗಿ ಗ್ಯಾರಂಟಿ ಅನುಷ್ಠಾನ ಶಾಹುಲ್ ಹಮೀದ್ ತಿಳಿಸಿದ್ದಾರೆ.
ಆಸ್ಪತ್ರೆಯ ಕಣ್ಣಿನ ಶಸ್ತ್ರ ಚಿಕಿತ್ಸಾ ಯಂತ್ರದ ಉದ್ಘಾಟನಾ ಕಾರ್ಯಕ್ರಮಕ್ಕೆ ಸರಕಾರದ ನಾಮನಿರ್ದೇಶಿತ ಅಧ್ಯಕ್ಷರು ಹಾಗೂ ಪ್ರತಿನಿಧಿಗಳ ಕಡೆಗಣನೆ ಮಾಡಿದ್ದಾರೆ ಎಂದು ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರಕ್ಷಾ ಸಮಿತಿಯ 15 ಲಕ್ಷ ಅನುದಾನದಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಯಂತ್ರ ಅಳವಡಿಕೆ ಮಾಡಲಾಗಿತ್ತು. ಇದರ ಉದ್ಘಾಟನೆ ನಡೆಸಲು ಶಾಸಕಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿತ್ತು.