ಮೈಸೂರು:ಉದ್ಯೋಗ, ಶೈಕ್ಷಣಿಕ, ಸಾಂಸ್ಕೃತಿಕ , ಕನ್ನಡ ನಾಡು ನುಡಿ, ಜಲ-ನೆಲದ ಹಾಗೂ ವಿವಿಧ ರಂಗಗಳಲ್ಲಿ ಕಾರ್ಯಾಚರಿಸಿಕೊಂಡು ಬರುತ್ತಿರುವ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಸಂಸ್ಥೆಯ ವತಿಯಿಂದ ಸಾಂಸ್ಕೃತಿಕ ನಗರಿ ಮೈಸೂರಿನ ಹೋಟೆಲ್ ಲೀ ರುಚಿಯಲ್ಲಿ ‘ಮಾನವ ಸಂಪನ್ಮೂಲ ನಾವೀನ್ಯ ನಾಯಕರು – ಕೌಶಲ್ಯ ಹಾಗೂ ತಂತ್ರಜ್ಞಾನ ಎಂಬ
ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮ ಆ.24 ರಂದು ನಡೆಯಲಿದೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಶಿಭಿರಾರ್ಥಿಗಳು ಭಾಗವಹಿಸುವ ಈ ಕಾರ್ಯಗಾರದ ಅಧ್ಯಕ್ಷತೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಅಧ್ಯಕ್ಷರಾದ ಡಾ. ಉಮ್ಮರ್ ಬೀಜದಕಟ್ಟೆ ವಹಿಸಲಿದ್ದಾರೆ.
ಹಿರಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ಡಾ. ಅನಂತ ಗೌಡ ತರಬೇತಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಫಾರ್ಮಡ್ ಲಿಮಿಟೆಡ್ನ ಖ್ಯಾತ ತರಬೇತುದಾರ ಹಾಗೂ ಸಹಾಯಕ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ವಿಕ್ರಂ ಸಾಗರ್ ಸಕ್ಸೇನಾ ಕಾರ್ಯಾಗಾರ ನಡೆಸಿಕೊಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ರಾಜ್ಯದಾದ್ಯಂತ ಸುಮಾರು 40ಕ್ಕೂ ಅಧಿಕ ವೃತ್ತಿಪರರು ಭಾಗವಹಿಸಲು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿರುವುದಾಗಿ ಕಾರ್ಯಕ್ರಮ ಸಂಯೋಜಕರಾದ ಶಶಿಕಾಂತ್ ಬೆಡಸೂರು ಅವರು ತಿಳಿಸಿದ್ದಾರೆ.