ಸುಳ್ಯ:ಗೂನಡ್ಕದ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಸಜ್ಜನೋತ್ಸವ, ಯಾರಾಗುವಿರಿ ಸಜ್ಜನ ಲಕ್ಪತಿ ಹಾಗೂ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮತ್ತು ಸಜ್ಜನ ಸಾಂಸ್ಕೃತಿಕ ಸಂಭ್ರಮ ಜ.6ರಂದು ಗೂನಡ್ಕ ಬೀಜದಕಟ್ಟೆಯ ಸಜ್ಜನ ಸಭಾ ಭವನದಲ್ಲಿ ನಡೆಯಲಿದೆ.
ಪೂ.9.15ಕ್ಕೆ ಯಾರಾಗುವಿರಿ ಸಜ್ಜನ ಲಕ್ಪತಿ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್ ಕಾರ್ಯಕ್ರಮ
ಉದ್ಸ್ಘಾಟಿಸುವರು.ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ. ಕೆ.ಎಂ.ಮುಸ್ತಫ ಹಾಜಿ ಮಾರ್ಗದರ್ಶನ ಹಾಗೂ ಅಬ್ದುಲ್ಲ ನಾವೂರು ಪರಿಕಲ್ಪನೆ ಮತ್ತು ಸಂಯೋಜನೆಯಲ್ಲಿ ನಡೆಯುವ ಯಾರಾಗುವಿರಿ ಸಜ್ಜನ ಲಕ್ಪತಿ ಕಾರ್ಯಕ್ರಮವನ್ನು ಎಂ.ಬಿ.ಸದಾಶಿವ ನಡೆಸಿ ಕೊಡಲಿದ್ದಾರೆ. ಮಧ್ಯಾಹ್ನ 12.15ರಿಂದ ನಡೆಯುವ ಸಜ್ಜನೋತ್ಸವ ಕಾರ್ಯಕ್ರಮವನ್ನು
ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸುವರು. ಗ್ರೀನ್ ಹೀರೋ ಆಫ್ ಇಂಡಿಯಾ ಹಾಗೂ ಗುಜರಾತ್ನ ಫಾರೆಸ್ಟ್ ಕ್ರಿಯೇಟರ್ಸ್ ಸಂಸ್ಥಾಪಕರಾದ ಡಾ.ಆರ್.ಕೆ.ನಾಯರ್ ಹಗೂ ಮಂಗಳೂರು ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ.ಶಿವರಾಂ ಅವರಿಗೆ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ್ ಪ್ರಶಸ್ತಿ ಪ್ರದಾನ ಮಾಡುವರು. ತಹಶೀಲ್ದಾರ್ ಜಿ.ಮಂಜುನಾಥ್ ಅವರು ಸಜ್ಜನ ಆದರ್ಶ ದಂಪತಿಗಳಿಗೆ ಬಹುಮಾನ ವಿತರಿಸುವರು. ನಿವೃತ್ತ ಪ್ರಾಂಶುಪಾಲ ಡಾ.ಪೂವಪ್ಪ ಕಣಿಯೂರು ಪ್ರಾಸ್ತಾವಿಕವಾಗಿ ಮಾತನಾಡುವರು. ಪತ್ರಕರ್ತ ದುರ್ಗಾಕುಮಾರ್ ನಾಯರ್ಕೆರೆ ಅಭಿನಂದನಾ ಭಾಷಣ ಮಾಡುವರು.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಾದ ಮೋಹನ್ ಕೊಠಾರಿ ಬಹುಮಾನ ವಿತರಿಸುವರು. ಮೂಡಬಿದಿರೆ ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಭಾತ್ ಬಲ್ನಾಡ್ ಸಮಾರೋಪ ಭಾಷಣ ಮಾಡುವರು. ಸಂಜೆ 6.30ರಿಂದ. ಸಾಂಸ್ಕೃತಿಕ ಕಾರ್ಯಕ್ರಮ ವಿಠಲ ನಾಯಕ್ ಕಲ್ಲಡ್ಕ ಅವರಿಂದ ಹಾಸ್ಯ ಸಂಜೆ ನಡೆಯಲಿದೆ ಎಂದು ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ತಿಳಿಸಿದ್ದಾರೆ.









