ಸುಳ್ಯ: ಸಜ್ಹನ ಪ್ರತಿಷ್ಠಾನದ ವತಿಯಿಂದ ಜ.6ರಂದು ನಡೆಯುವ ಸಜ್ಜನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ನಗರ ಪಂಚಾಯತ್ ಕಚೇರಿಯಲ್ಲಿ ಸುಳ್ಯ ತಹಸೀಲ್ದಾರ್ ಜಿ. ಮಂಜುನಾಥ್ ರವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ
ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಸಜ್ಜನ ಪ್ರತಿಷ್ಠಾನದ ಸಲೀಂ ಪೆರುಂಗೋಡಿ, ಉನೈಸ್ ಗೂನಡ್ಕ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ,ಧೀರಾ ಕ್ರಾಸ್ತಾ, ಶೀಲಾ ಅರುಣ ಕುರುಂಜಿ, ಶಶಿಕಲಾ ನೀರಬಿದಿರೆ,ಸುಶೀಲಾ ಜಿನ್ನಪ್ಪ, ಶಿಲ್ಪಾ ಸುದೇವ್, ಪೂಜಿತಾ ಕೆ.ಯು, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ ಮೊದಲದವರು ಉಪಸ್ಥಿತರಿದ್ದರು.










