ಪಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ, ಪಂಜ ವಲಯದ ಜನಜಾಗೃತಿ ವೇದಿಕೆ, ಸ್ವಸಹಾಯ ಸಂಘಗಳ ಒಕ್ಕೂಟ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಶೌರ್ಯ ವಿಪತ್ತು, ಸ್ಥಳೀಯ ಗಣ್ಯರ ಸಮಲೋಚನಾ ಸಭೆಯು, ಬಳ್ಪ ಹಾಲು ಉತ್ಪಾದಕರ ಕಟ್ಟಡದಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ
ತಾಲೂಕು ಅಧ್ಯಕ್ಷ ಎಂ.ವೆಂಕಪ್ಪ ಗೌಡ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸೌಲಭ್ಯಗಳನ್ನು ಹೆಚ್ಚು ಬಳಕೆ ಮಾಡಿಕೊಳ್ಳಿ ಎಂದು ಅವರು ಕರೆ ನೀಡಿದರು.ಪಂಜ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಸುಬ್ರಹ್ಮಣ್ಯ ಕುಳ, ಜನಜಾಗೃತಿ ವೇದಿಕೆಯ
ಮಾಜಿ ಅಧ್ಯಕ್ಷ ಲೋಕನಾಥ ಅಮೆಚೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಮಾತನಾಡಿದರು.
ಭಜನಾ ಪರಿಷತ್ ಸ್ಥಾಪಕ ಅಧ್ಯಕ್ಷ ವಿಶ್ವನಾಥ ಅರ್ಗುಡಿ, ಜನಜಾಗೃತಿ ವೇದಿಕೆಯ ಅಧ್ಯಕ್ಷ ಮೋನಪ್ಪ ಗೌಡ ಬೊಳ್ಳಾಜೆ, ಪಂಜ ವಲಯಾಧ್ಯಕ್ಷ ಧರ್ಮಪಾಲ ಕಣ್ಕಲ್, ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ ಕೇನ್ಯ ಇದರ ಅಧ್ಯಕ್ಷ ವಿನೋದ್ ಬೊಳ್ಮಲೆ, ಭಜನಾ ಪರಿಷತ್ ವಲಯ ಅಧ್ಯಕ್ಷರಾದ ಪ್ರಕಾಶ್ ನರಿಯಂಗ, ಭಜನಾ ಪರಿಷತ್ ಪದಾಧಿಕಾರಿಗಳು, ಜನಜಾಗೃತಿ ತಾಲೂಕು ಕೋ ಅಪ್ಟ್ ಸದಸ್ಯರು, ಶೌರ್ಯ ವಿಪತ್ತು ಸದಸ್ಯರು ಮತ್ತು ಪಂಜ ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕಿ ಮಮತಾ ಎನ್ ಸ್ವಾಗತಿಸಿದರು. ಸೇವಾಪ್ರತಿನಿಧಿ ತಾರಾ ವಂದಿಸಿದರು.















