ಸುಳ್ಯ :ಸಮಸ್ತ ವಿದ್ಯಾಭ್ಯಾಸ ಮಂಡಳಿ ನಡೆಸಿದ 2023-24ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದ್ರಸದಿಂದ 5, 7, 10 ನೇ ತರಗತಿಯಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸತತ ಏಳನೇ ಬಾರಿ
ಶೇ.100 ಫಲಿತಾಂಶ ಗಳಿಸಿದೆ. 7 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 05 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ವಿದ್ಯಾರ್ಥಿಗಳ ಪರಿಶ್ರಮ, ಅಧ್ಯಾಪಕರ ಪರಿಶೀಲನೆ, ಜಮಾಅತ್ ಕಮಿಟಿಯ ಸಹಕಾರ ಹಾಗೂ ಪೋಷಕರ ಪ್ರೋತ್ಸಾಹ ಗುಣಮಟ್ಟದ ಸಾಧನೆಗೆ ಸಹಕಾರಿಯಾಗಿದೆ ಎಂದು ಸದರ್ ಮುಅಲ್ಲಿಂ ಮುಹಮ್ಮದ್ ನವವಿ ಮುಂಡೋಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.