ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ನ. 29ರಂದು ಚೆಂಬು ಕೂಡಡ್ಕದಲ್ಲಿ ನಡೆಯುವ ಮೂರನೇ ಅರೆಭಾಷೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲೀಲಾ ದಾಮೋದರ್ ಅವರನ್ನು ಫಲತಾಂಬೂಲಗಳನ್ನು ನೀಡಿ ಸಮ್ಮೇಳನಕ್ಕೆ ಅಧಿಕೃತವಾಗಿ ಆಮಂತ್ರಿಸಲಾಯಿತು.ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಸದಸ್ಯರಾದ ಚಂದ್ರಶೇಖರ ಪೇರಾಲು ಡಾ. ಜ್ಞಾನೇಶ್ ಎನ್.ಎ, ಚಂದ್ರಾವತಿ ಬಡ್ಡಡ್ಕ ಹಾಗೂ ದಾಮೋದರ ಕುಂದಲ್ಪಾಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.















