ಸಂಪಾಜೆ:ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರಾದ ಪ್ರಿಯಾಂಕಾ ಖರ್ಗೆ ಭೇಟಿ ಸಂಪಾಜೆ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ
ಒದಗಿಸುವಂತೆ ಮನವಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ, ಕೆಪಿಸಿಸಿ ವಕ್ತಾರ ಟಿ. ಎಂ. ಶಾಹಿದ್ ತೆಕ್ಕಿಲ್, ಸಂಪಾಜೆ ಗ್ರಾ.ಪಂ. ಉಪಾಧ್ಯಕ್ಷೆ ಎಸ್. ಕೆ. ಹನೀಫ್, ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಡಡ್ಕ,ಅನುಪಮಾ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ ಉಬೈಸ್ ಗೂನಡ್ಕ ಜೆ. ಬಿ ಹನೀಫ್ ಕಲ್ಲುಗುಂಡಿ ಉಪಸ್ಥಿತರಿದ್ದರು





