ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಹಾಗೂ ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ದ. ಕ. ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ವಹಿಸಿದ್ದರು.ಮುಖ್ಯ ಅತಿಥಿಯಾಗಿದ್ದ
ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ. ಎಂ. ಶಾಹಿದ್ ತೆಕ್ಕಿಲ್ ಮಾತನಾಡಿ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸುಳ್ಯ ತಾಲೂಕು ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ.ಬಿ.ಸುಧಾಕರ ರೈ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಅಕ್ಷಯ ಚಾರಿಟೇಬಲ್ ಟ್ರಸ್ಟ್ನ ಸಂಚಾಲಕ ಕರೀಂ ಕದ್ಕಾರ್, ಸಂಪಾಜೆ
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಉಪಾಧ್ಯಕ್ಷ ಎಸ್. ಕೆ. ಹನೀಫ್, ವಿಷ್ಣು ಮೂರ್ತಿ ದೈವಸ್ಥಾನದ ಅಧ್ಯಕ್ಷರಾದ ಜಗದೀಶ್ ರೈ, ಪಂಚಾಯತ್ ಸದಸ್ಯರಾದ ಶೌವಾದ್ ಗೂನಡ್ಕ, ಅಬೂಸಾಲಿ ಪಿ. ಕೆ., ವಿಮಲಾ ಪ್ರಸಾದ್, ಸಜ್ಜನ ಪ್ರತಿಷ್ಠಾನದ ರಹೀಂ ಬೀಜದಕಟ್ಟೆ, ಸಲೀಂ ಪೆರುಂಗೋಡಿ, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಗೂನಡ್ಕ, ಕಾರ್ಯದರ್ಶಿ ಹಮೀದ್ ಸಖಾಪಿ ಪಾಣಾಜೆ, ಅಕ್ಷಯ ಟ್ರಸ್ಟ್ ಮೀಡಿಯಾ ಕಾರ್ಯದರ್ಶಿ ಫೈಝಲ್ ಝುಹರಿ ರೆಡ್ ಕ್ರಾಸ್ ಸಂಸ್ಥೆಯ ಪ್ರವೀಣ್, ಅಬ್ಬಾಸ್ ಸಂಟ್ಯಾರ್ ಧರ್ಮಸ್ಥಳ ವಿಪತ್ತು ತಂಡದ ಚಿದಾನಂದ ಮೂಡನಕಜೆ, ಮೊದಲಾದವರು ಉಪಸ್ಥಿತರಿದ್ದರು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ಸೇರಿದಂತೆ 53 ಜನ ರಕ್ತದಾನ ಮಾಡಿದರು.