ಸಂಪಾಜೆ: ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ದ.ಕ.ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಅವರ ನೇತೃತ್ವದ ನಿಯೋಗವು ಬೆಂಗಳೂರಿನ
ಕೆ.ಪಿ.ಸಿ.ಸಿ.ಕಚೇರಿಯಲ್ಲಿ ಭೇಟಿ ಮಾಡಿ ಸಂಪಾಜೆ ಗ್ರಾಮದ ಅಭಿವೃದ್ಧಿಗಾಗಿ 50 ಲಕ್ಷ ರೂ.ಗಳ ಅನುದಾನ ಒದಗಿಸುವಂತೆ ಮನವಿಯನ್ನು ಮಾಡಿತ್ತು, ಇದೀಗ ಮನವಿಗೆ ಸ್ಪಂದಿಸಿದ ಸಚಿವರು ಇಲಾಖೆಯ ಯೋಜನೆಗಳ ಮೂಲಕ ಅನುದಾನ ನೀಡುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಕೆ.ಪಿ.ಜಾನಿ ಕಲ್ಲುಗುಂಡಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಎ.ಕೆ.ಇಬ್ರಾಹಿಂ ಕಲ್ಲುಗುಂಡಿ, ಕಾಂಗ್ರೆಸ್ ಪ್ರಮುಖರಾದ ವಸಂತ ಗೌಡ ಪೆಲ್ತಡ್ಕರವರು ಉಪಸ್ಥಿತರಿದ್ದರು.