ಸುಳ್ಯ:ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಮತಗಳ್ಳತನದ ವಿರುದ್ಧ ಜನಜಾಗೃತಿ ಜಾಥಾ ಮತ್ತು ಸನ್ಮಾನ ಕಾರ್ಯಕ್ರಮ ಡಿ.7ರಂದು ಭಾನುವಾರ ಸಂಜೆ 5ಕ್ಕೆ ಕಲ್ಲುಗುಂಡಿ ಕೃಷಿಪತ್ತಿನ ಸಹಕಾರಿ ಸಮಘದ ಸಮನ್ವಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಧ್ಯಾಹ್ನ ನಂತರ
3 ಗಂಟೆಯಿಂದ ಕೂಲಿಶೆಡ್ಡಿನಿಂದ ಜನಜಾಗೃತಿ ಜಾಥಾ ನಡೆಯಲಿದೆ.ಬಳಿಕ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮುಖ್ಯ ಭಾಷಣ ಮಾಡುವರು. ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಅವರನ್ನು ಸನ್ಮಾನಿಸಲಾಗುವುದು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ ಹಾಗೂ ಕಾಂಗ್ರೆಸ್ ಮುಖಂಡರು ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರು ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿರ್ದೇಶಕರಾದ ಕೆ.ಪಿ.ಜಾನಿ ಕಲ್ಲುಗುಂಡಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜು ನೆಲ್ಲಿಕುಮೇರಿ, ಸಂಪಾಜೆ ವಲಯ ಕಾಂಗ್ರೆಸ್ ಉಪಾಧ್ಯಕ್ಷ ವಸಂತ ಪೆಲ್ತಡ್ಕ, ಪ್ರಧಾನ ಕಾರ್ಯದರ್ಶಿ ಲೂಕಾಸ್ ಟಿ.ಐ. ಉಪಸ್ಥಿತರಿದ್ದರು.





