ಸಂಪಾಜೆ: ಸಂಪಾಜೆ ಗ್ರಾಮದ ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚೆಗೆ ಆದ ಬೆಳವಣಿಗೆಗಳು ಮತ್ತು ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಲು ಸಂಪಾಜೆ ವಲಯ ಕಾಂಗ್ರೆಸ್ ನಾಯಕರ ಹಾಗೂ ಕಾರ್ಯಕರ್ತರ ಸಭೆ ಕಲ್ಲುಗುಂಡಿಯ ಸಮನ್ವಯ ಸಹಕಾರಿ ಸಭಾಭವನದಲ್ಲಿ ಜರುಗಿತು.ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಮತ್ತಿತರ ವಿಷಯಗಳ ಬಗ್ಗೆ ಬಿರುಸಿನ ಚರ್ಚೆ ನಡೆಯಿತು.ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞು ಗೂನಡ್ಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಪಿ.ಕೆ.ಅಬೂಸಾಲಿ ಗೂನಡ್ಕ ಸಭೆಯಲ್ಲಿ ಮಾತನಾಡಿದರು. ಸಂಪಾಜೆ ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಐ.ಲೂಕಾಸ್, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಎ.ಕೆ.ಇಬ್ರಾಹಿಂ ಕಲ್ಲುಗುಂಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೆ.ಪಿ.ಸಿ.ಸಿ.ವಕ್ತಾರ ಶೌವಾದ್ ಗೂನಡ್ಕ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಜ್ಞಾನಶೀಲನ್ (ರಾಜು) ನೆಲ್ಲಿಕುಮೇರಿ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರ ಬಿ.ಎಸ್.ಯಮುನಾ, ಮಾಜಿ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರಾದ ಸುಶೀಲ, ಸಂಪಾಜೆ ವಲಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಎಂ.ಅಶ್ರಫ್, ಸಂಪಾಜೆ ವಲಯ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಾಲಚಂದ್ರ, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಎಚ್.ಹಮೀದ್, ಉಷಾ ರಾಮ ನಾಯ್ಕ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಬೆಂಜಮೀನ್ ಡಿ’ಸೋಜಾ, ಎ.ಕೆ.ಹನೀಫ್, ಪ್ರಮುಖ ಕಾರ್ಯಕರ್ತರಾದ ವಸಂತ ಗೌಡ ಪೆಲ್ತಡ್ಕ, ಶ್ರೀಧರ ಕಡೆಪಾಲ, ಕಾಂತಿ ಬಿ.ಎಸ್, ಪ್ರಮೀಳಾ, ಉಮ್ಮರ್ ದರ್ಖಾಸ್, ಪಳನಿವೇಲು, ರುಡಾಲ್ಫ್ ಕ್ರಾಸ್ತಾ, ಜೋಯ್ ಡಿ’ಸೋಜಾ, ಸೆಬಾಸ್ಟಿಯನ್, ವೆಂಕಪ್ಪ ಗೌಡ, ಮಹಮ್ಮದ್ ಹನೀಫ್, ಸಿಲ್ವಸ್ಟರ್ ಡಿ’ಸೋಜಾ, ರವಿಚಂದ್ರ, ಶಿಹಾಬುದ್ದೀನ್, ವಿಕ್ಟರ್ ಕ್ರಾಸ್ತಾ ಸೇರಿದಂತೆ ಮತ್ತೀತರರು ಈ ಸಂದರ್ಭ ಉಪಸ್ಥಿತರಿದ್ದರು.