ಸುಳ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.ಸಂಪಾಜೆಯಿಂದ ಕಲ್ಲುಗುಂಡಿವರೆಗೆ ರೋಡ್ ಶೋ ಬಳಿಕ ನಡೆದ ಕಾರ್ನರ್ ಮೀಟಿಂಗ್ ನಲ್ಲಿ ಮಾತನಾಡಿದರು.ಪ್ರಜಾಪ್ರಭುತ್ವದ
ದೊಡ್ಡ ಹಬ್ಬವಾದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ. ಅಭಿವೃದ್ಧಿಯ ವಿಚಾರವಾಗಿ ನಾವು ಚುನಾವಣೆಯನ್ನು ಎದುರಿಸಬೇಕಾಗಿದೆ ಎಂದರು. ಬಿಜೆಪಿ ಸಂಸದರಿದ್ದ ಕಳೆದ ಮೂವತ್ಮೂರು ವರ್ಷಗಳಲ್ಲಿ ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್ ಸಂಸದರಿದ್ದಾಗ ಆಗಿದ್ದ ಅಭಿವೃದ್ಧಿ, ಜಿಲ್ಲೆಗೆ ಬಂದಿದ್ದ ಯೋಜನೆಗಳು ಜಿಲ್ಲೆಯನ್ನು ಮಾದರಿಯಾಗಿ ರೂಪಿಸಿತ್ತು. ಮುಂದೆಯೂ ಜಿಲ್ಲೆ ದೇಶದಲ್ಲೇ ಮಾದರಿಯಾಗಿ ರೂಪುಗೊಳ್ಳಲು ಕಾಂಗ್ರೆಸನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಇಂದು ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಆಗಬೇಕಾಗಿದೆ. ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಹಾಗೂ ನುಡಿದಂತೆ ನಡೆಯಲಿದ್ದೇವೆ. ಈಗಾಗಲೇ ಗ್ಯಾರೆಂಟಿ ಯೋಜನೆ ನೀಡಿ, ಅನುಷ್ಠಾನ ಮಾಡಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಇನ್ನು ಹಲವು ಗ್ಯಾರೆಂಟಿ ಯೋಜನೆಗಳು ಸಿಗಲಿವೆ ಎಂದರು.
ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಮಾತನಾಡಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅತ್ಯುತ್ತಮ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಪೂಜಾರಿ ಇದ್ದಾರೆ. ನಮ್ಮ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಗೇರುನಿಗಮದ ಅಧ್ಯಕ್ಷೆ ಮಮತ ಗಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಂ. ಶಹೀದ್ ತೆಕ್ಕಿಲ್, ಎಂ
ಎಸ್.ಮಹಮ್ಮದ್, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ,
ಗ್ರಾ.ಪಂ. ಅಧ್ಯಕ್ಷೆ ಸುಮತಿ ಶಕ್ತಿವೇಲು,
ಕಾಂಗ್ರೆಸ್ ಮುಖಂಡರಾದ ಜಿ. ಕೃಷ್ಣಪ್ಪ, ಎಂ.ವೆಂಕಪ್ಪ ಗೌಡ, ನಿತ್ಯಾನಂದ ಮುಂಡೋಡಿ, ಎಂ.ಎಸ್. ಮಹಮ್ಮದ್, ರಾಧಾಕೃಷ್ಣ ಬೊಳ್ಫೂರು, ಜಿ.ಕೆ. ಹಮೀದ್, ರಹೀಂ ಬೀಜದಕಟ್ಟೆ, ಎಸ್.ಕೆ. ಹನೀಫ್, ಅಬೂಸಾಲಿ ಗೂನಡ್ಕ, ಕಿರಣ್ ಬುಡ್ಲೆಗುತ್ತು, ಮಹಮದ್ ಕುಂಞಿ ಗೂನಡ್ಕ, ಸರಸ್ವತಿ ಕಾಮತ್, ಗೀತಾ ಕೋಲ್ಚಾರ್ , ಕೆ.ಪಿ. ಜಾನಿ ಕಲ್ಲುಗುಂಡಿ, ವಸಂತ ಪೆಲ್ತಡ್ಕ, ಎ.ಕೆ. ಇಬ್ರಾಹಿಂ, ಶೌವಾದ್ ಗೂನಡ್ಕ, ಯಮುನ ಬಿ.ಎಸ್., ಸುಂದರಿ ಮುಂಡಡ್ಕ, ಕಾಂತಿ ಬಿ.ಎಸ್., ಲೂಕಾಸ್ ಟಿ.ಐ, ಲಿಸ್ಸಿ ಮೊನಾಲಿಸಾ, ರಾಜು ನೆಲ್ಲಿಕುಮೇರಿ, ವಹೀದಾ ಇಸ್ಮಾಯಿಲ್, ರಾಜೀವಿ ಆರ್. ರೈ, ಜೂಲಿಯಾ ಕ್ರಾಸ್ತಾ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಭೇಟಿ:
ರೋಡ್ ಶೋ, ಕಾರ್ನರ್ ಸಭೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.